ಡಿಎಂಕೆ ಸಂಸದ ದಯಾನಿಧಿ ಮಾರನ್ ವಿರುದ್ಧ ಆಯೋಗಕ್ಕೆ ದೂರು

Contacts:

Chennai

oi-Rajashekhar Myageri

|

Published: Wednesday, March 31, 2021, 20:54 [IST]

ಚೆನ್ನೈ, ಮಾರ್ಚ್ 31: ತಮಿಳುನಾಡು ವಿಧಾನಸಭಾ ಚುನಾವಣೆ ನಡುವೆ ಡಿಎಂಕೆ ಸಂಸದ ದಯಾನಿಧಿ ಮಾರನ್ ವಿರುದ್ಧ ಚುನಾವಣಾ ಆಯೋಗಕ್ಕೆ ಅಖಿಲ ಭಾರತ ಅಣ್ಣಾ ದ್ರಾವಿಡ್ ಮುನ್ನೇತ್ರ ಕಳಗಂ ದೂರು ನೀಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಹೆಸರಿಗೆ ಕಳಂಕ ತರುವ ದುರುದ್ದೇಶದಿಂದ ಕೂಡಿದೆ ಎಂದು ಎಐಎಡಿಎಂಕೆ ದೂರಿನಲ್ಲಿ ಉಲ್ಲೇಖಿಸಿದೆ. ಅಲ್ಲದೇ, ದಯಾನಿಧಿ ಮಾರನ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕು ಎಂದು ಆಗ್ರಹಿಸಿದೆ.

ಸಂಸದ ಎ.ರಾಜಾ ಆರೋಪಕ್ಕೆ ಪ್ರಚಾರ ಸಭೆಯಲ್ಲಿ ಕಣ್ಣಿರು ಹಾಕಿದ ತಮಿಳುನಾಡು ಸಿಎಂ

ತಮಿಳುನಾಡು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಡಿಎಂಕೆ ಸಂಸದ ದಯಾನಿಧಿ ಮಾರನ್, ಅವಾಚ್ಯ ಮತ್ತು ಅಸಭ್ಯ ಪದಪ್ರಯೋಗ ಮಾಡಿದ್ದರು. ರಾಜ್ಯದ ಮಹಿಳೆಯರು ಸೇರಿದಂತೆ ಬಹುಸಂಖ್ಯಾತ ವರ್ಗದ ವಿರುದ್ಧ ದುರುದ್ದೇಶಪೂರಿತ ಹೇಳಿಕೆ ನೀಡಿದ್ದರು ಎಂದು ಎಐಎಡಿಎಂಕ ಬಾಬು ಮುರುಗವೇಲ್ ದೂರಿದ್ದಾರೆ.

ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳ ಚುನಾವಣೆಗೆ ಪ್ರಾದೇಶಿಕ ಎಐಎಡಿಎಂಕೆ ಪಕ್ಷದ ಜೊತೆಗೆ ಭಾರತೀಯ ಜನತಾ ಪಕ್ಷವು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ. ರಾಜ್ಯ ಚುನಾವಣಾ ಅಖಾಡದಲ್ಲಿ ಬಿಜೆಪಿಯು 20 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಜ್ಯದಲ್ಲಿ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

Posted in: Kannada News Posted by: admin On: