ಬಂಗಾಳ ಚುನಾವಣೆ: ಮಾಜಿ ಕ್ರಿಕೆಟಿಗ, ಬಿಜೆಪಿ ಅಭ್ಯರ್ಥಿ ಅಶೋಕ್ ದಿಂಡಾ ಮೇಲೆ ಹಲ್ಲೆ

Contacts:

Kolkata

oi-Puttappa Koli

|

Published: Wednesday, March 31, 2021, 7:22 [IST]

ಕೋಲ್ಕತಾ, ಮಾರ್ಚ್ 31: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣಾ ಕಾವು ಜೋರಾಗಿರುವಾಗಲೇ ಮಂಗಳವಾರ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಅಭ್ಯರ್ಥಿ ಅಶೋಕ್ ದಿಂಡಾ ಅವರ ಮೇಲೆ ಹಲ್ಲೆ ಮಾಡಲಾಗಿದೆ.

ಅಶೋಕ್ ದಿಂಡಾ ಅವರು ಕ್ರಿಕೆಟ್ ಆಟಕ್ಕೆ ನಿವೃತ್ತಿ ಘೋಷಿಸಿದ ನಂತರ ಇತ್ತೀಚೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದರು ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಹ ನೀಡಿದೆ. ಈಗ ಅವರ ಹಲ್ಲೆಯಾಗಿರುವುದು ರಾಜಕೀಯ ಪ್ರೇರಿತ ಎಂಬ ಮಾತುಗಳು ಕೇಳಿಬಂದಿವೆ.

ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರಿಗೆ ರಕ್ಷಣೆ ಕೊಡಿ ಎಂದ ಮಮತಾ ಬ್ಯಾನರ್ಜಿ!

ದಿಂಡಾ ಅವರು ಬಂಗಾಳದ ಮೊಯ್ನಾದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಚುನಾವಣಾ ಪ್ರಚಾರದ ರೋಡ್ ಶೋ ಸಮಯದಲ್ಲಿ ಅಶೋಕ್ ದಿಂಡಾ ಅವರ ಕಾರಿನ ಮೇಲೆ ದಾಳಿ ಮಾಡಲಾಗಿದ್ದು, ಅವರ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಈ ದಾಳಿಯ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಅಶೋಕ್ ದಿಂಡಾ, ಹಲ್ಲೆಗೆ ತೃಣಮೂಲ ಕಾಂಗ್ರೆಸ್ ಅನ್ನು ದೂಷಿಸಿದ್ದಾರೆ. “”ಸಂಜೆ 4ರ ಸುಮಾರಿಗೆ ತಮ್ಮ ಬೆಂಗಾವಲು ಪಡೆಯ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಮೊಯ್ನಾದ ಬಿಡಿಒ ಬಳಿ ಟಿಎಂಸಿ ಕಾರ್ಯಕರ್ತರು ತಮ್ಮನ್ನು ಸುತ್ತುವರೆದು ಹಲ್ಲೆ ಮಾಡಿದ್ದಾರೆ” ಎಂದು ದಿಂಡಾ ಬರೆದುಕೊಂಡಿದ್ದಾರೆ.

Posted in: Kannada News Posted by: admin On: