ಭಾರತದಲ್ಲಿ 6.24 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

Contacts:

India

oi-Rajashekhar Myageri

|

Published: Tuesday, March 30, 2021, 22:48 [IST]

ನವದೆಹಲಿ, ಮಾರ್ಚ್ 30: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತವು ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದೇಶದಲ್ಲಿ 6 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

ದೇಶಾದ್ಯಂತ ಒಂದೇ ದಿನದಲ್ಲಿ 12 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಮಂಗಳವಾರ ಸಂಜೆ 7 ಗಂಟೆ ವೇಳೆಗೆ ದೇಶದಲ್ಲಿ 12.94 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ಹತ್ತು ಜಿಲ್ಲೆಗಳಲ್ಲಿದೆ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣ

ಭಾರತದಲ್ಲಿ 74 ದಿನಗಳಲ್ಲಿ 6,24,08,333 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 82,00,007 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 52,07,368 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 90,08,905 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 37,70,603 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ಎರಡನೇ ಹಂತದ ಲಸಿಕೆ ಅಭಿಯಾನ:

ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್ 1ರಿಂದ ಆರಂಭವಾಗಿದ್ದು, ಈವರೆಗೂ 60 ವರ್ಷಕ್ಕಿಂತ ಮೇಲ್ಪಟ್ಟ 2,90,20,989 ಜನರಿಗೆ ಕೊವಿಡ್-19 ಲಸಿಕೆಯ ಮೊದಲ ಡೋಸ್ ಮತ್ತು 36,899 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 71,58,657 ಫಲಾನುಭವಿಗಳಿಗೆ ಮೊದಲ ಡೋಸ್ ಮತ್ತು 4,905 ಜನರಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಎರಡು ಮಾದರಿ ಲಸಿಕೆ:

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಫೆಬ್ರವರಿ 2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿತ್ತು.

Posted in: Kannada News Posted by: admin On: