ಮಹಾರಾಷ್ಟ್ರದಲ್ಲಿ ಭಯ ಹುಟ್ಟಿಸಿದ ಕೊರೊನಾವೈರಸ್ ಸೋಂಕು!

Contacts:

Mumbai

oi-Rajashekhar Myageri

|

Published: Wednesday, March 31, 2021, 21:04 [IST]

ಮುಂಬೈ, ಮಾರ್ಚ್ 31: ಮಹಾರಾಷ್ಟ್ರದಲ್ಲಿ ಮಂಗಳವಾರ ಕೊಂಚ ಸಮಾಧಾನ ನೀಡಿದ್ದ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಬುಧವಾರದ ವೇಳೆಗೆ ಮತ್ತೊಮ್ಮೆ ಭಯ ಹುಟ್ಟಿಸಿದೆ. ಒಂದೇ ದಿನದಲ್ಲಿ 39544 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ. ಮಂಗಳವಾರ 139 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಬುಧವಾರ 227 ಜನ ಕೊರೊನಾದಿಂದ ಉಸಿರು ಚೆಲ್ಲಿದ್ದಾರೆ. ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 54,649ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂನಿಂದ ಕೊರೊನಾಗೆ ಕಡಿವಾಣ!?

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 28,12,980ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 23,600 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 24,00,727ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 3,56,243 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಾಗ್ಪುರ್ ಜಿಲ್ಲೆಯಲ್ಲೇ 2885 ಕೊವಿಡ್-19 ಪ್ರಕರಣ:

ಮಹಾರಾಷ್ಟ್ರದ ನಾಗ್ಪುರ್ ಜಿಲ್ಲೆಯಲ್ಲಿ ಒಂದೇ ದಿನ 2885 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1705 ಸೋಂಕಿತರು ಗುಣಮುಖರಾಗಿದ್ದು, 58 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,26,038ಕ್ಕೆ ಏರಿಕೆಯಾಗಿದ್ದು, ಈವರೆಗೂ 1,81,609 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 5098ಕ್ಕೆ ಏರಿಕೆಯಾಗಿದ್ದರೆ, ಜಿಲ್ಲೆಯಲ್ಲಿ 39,331 ಸಕ್ರಿಯ ಪ್ರಕರಣಗಳಿವೆ.

Posted in: Kannada News Posted by: admin On: