ವಿಡಿಯೋ; ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ

Contacts:

Ballari

oi-Bhima Raja

By ವಿಜಯನಗರ ಪ್ರತಿನಿಧಿ

|

Updated: Sunday, July 25, 2021, 18:35 [IST]

Google Oneindia Kannada News

ವಿಜಯನಗರ, ಜುಲೈ 25; ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇದೆ. 10 ಕ್ರಸ್ಟ್ ಗೇಟ್‌ಗಳ ಮೂಲಕ 17,986 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ.

ಭಾನುವಾರ ಜಲಾಶಯದಿಂದ ನದಿಗೆ ನೀರು ಬಿಡಲಾಗಿದೆ. ತುಂಗಭದ್ರಾ ಜಲಾಶಯ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಜೀವನಾಡಿಯಾಗಿದೆ. ಅಪಾರ ಪ್ರಮಾಣದ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.

 ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ತುಂಗ ಮತ್ತು ಭದ್ರಾ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಲಾಶಯದಲ್ಲಿ 12 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ತುಂಗಭದ್ರಾ ಡ್ಯಾಂಗೆ ಕೈಗಾರಿಕಾ ಭದ್ರತಾ ಪಡೆ ರಕ್ಷಣೆ ತುಂಗಭದ್ರಾ ಡ್ಯಾಂಗೆ ಕೈಗಾರಿಕಾ ಭದ್ರತಾ ಪಡೆ ರಕ್ಷಣೆ

ಪ್ರಸ್ತುತ ಜಲಾಶಯಕ್ಕೆ 1.73 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಸದ್ಯ ಜಲಾಶಯದಲ್ಲಿ 83.277 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 1,633 ಅಡಿ. ಈಗ 1,628 ಅಡಿ ನೀರಿನ ಸಂಗ್ರಹವಿದೆ.

ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತದೆ ಹಾಗಾಗಿ ನದಿಪಾತ್ರದ ಜನರು ಸುರಕ್ಷಿತ ಸ್ಥಳದಲ್ಲಿ ಇರಲು ತುಂಗಭದ್ರಾ ಜಲಾಶಯದ ಆಡಳಿತ ಮಂಡಳಿ ಎಚ್ಚರಿಕೆಯನ್ನು ನೀಡಿದೆ.

ಭಾನುವಾರ ತುಂಗಭದ್ರಾ ಡ್ಯಾಂ ಆಡಳಿತ ಮಂಡಳಿ ಅಧಿಕಾರಿಗಳಯ ಜಲಾಶಯಕ್ಕೆ ಪೂಜೆ ಸಲ್ಲಿಸಿ, ಕ್ರಸ್ಟ್‌ಗೇಟ್‌ಗಳನ್ನು ಎತ್ತುವ ಮೂಲಕ ನದಿಗೆ ನೀರು ಹರಿಸಿದರು.

English summary

17,986 Cusec of water released to river from Tungabhadra dam at Hospet, Vijayanagara.

Posted in: Kannada News Posted by: admin On: